
ಶಿವಮೊಗ್ಗ: ಎಡೆಬಿಡದೆ ಸುರಿದ ಭಾರೀ ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ, ವೃದ್ದೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಮನೆಯಲ್ಲಿದ್ದ ಇತರೆ ಸದಸ್ಯರಿಗೆ ಸಣ್ಣಪುಟ್ಟ ಗಾಯವಾದ ಘಟನೆ ತಡರಾತ್ರಿ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಅಡಗಡಿ ಗ್ರಾಮದಲ್ಲಿ ನಡೆದಿದೆ.

j3tvkannada
100 ವರ್ಷ ವಯೋಮಾನದ ಸಿದ್ದಮ್ಮ ಮೃತಪಟ್ಟ ವಯೋವೃದ್ದೆಯಾಗಿದ್ದಾರೆ. ಇವರು ದಾವಣಗೆರೆ ಜಿಲ್ಲೆ ಹೊನ್ನಾಳ್ಳಿ ತಾಲೂಕಿನ ಕುಂಕೋವ ಗ್ರಾಮದ ನಿವಾಸಿಯಾಗಿದ್ದಾರೆ. ಇತ್ತೀಚೆಗೆ ಅಡಗಡಿ ಗ್ರಾಮದಲ್ಲಿರುವ ಸಂಬಂಧಿ ಹೇಮಾವತಿ ಎಂಬುವವರ ಮನೆಗೆ ಆಗಮಿಸಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಘಟನೆಯಲ್ಲಿ ಮನೆಯಲ್ಲಿದ್ದ ಹೇಮಾವತಿ ಎಂಬುವವರಿಗೆ ಗಾಯವಾಗಿದ್ದು, ಅವರನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ಅವರ ಕುಟುಂಬ ಸದಸ್ಯರಾದ ಪಲ್ಲವಿ, ಪರಶುರಾಮ್, ಚೇತನ್ ಎಂಬುವವರಿಗೆ ಸಣ್ಣ ಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ತಾಲೂಕು ಕಚೇರಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಶಿವಮೊಗ್ಗ ತಹಶೀಲ್ದಾರ್ ವಿ.ಎಸ್ ರಾಜೀವ್ ಅವರು ಮಾಹಿತಿ ನೀಡಿದ್ದಾರೆ.