
ಬೆಂಗಳೂರು : ಇತ್ತೀಚಿಗೆ ರಾಜ್ಯ ರಾಜಧಾನಿಯಲ್ಲಿ ಅಪಘಾತ ಪ್ರಕರಣಗಳು ಕೂಡ ಹೆಚ್ಚಿದೆ. ನೆಲಮಂಗಲ ನಗರದ ಕುಣಿಗಲ್ ಬೈಪಾಸ್ ನಲ್ಲಿ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರು ಡ್ಯಾನ್ಸರ್ಗಳು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಶ್ರೀರಾಮಪುರದ 22 ವರ್ಷದ ಪ್ರಜ್ವಲ್ ಹಾಗೂ 21 ವರ್ಷದ ಸಹನಾ ಮೃತ ದುರ್ದೈವಿಗಳಾಗಿದ್ದಾರೆ. ಇಬ್ಬರೂ ಕೂಡ ಡ್ಯಾನ್ಸರ್ಗಳಾಗಿದ್ರು ಎಂದು ತಿಳಿದು ಬಂದಿದೆ. ಇತ್ತೀಚಿಗಷ್ಟೇ ನಟ ನೆನಪಿರಲಿ ಪ್ರೇಮ್ ಅವರ ಕಾರ್ಯಕ್ರಮದಲ್ಲಿ ಈ ಇಬ್ಬರು ಡ್ಯಾನ್ಸರ್ಸ್ ಭಾಗಿಯಾಗಿದ್ರು ಎನ್ನಲಾಗ್ತಿದೆ.
ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನೆನಪಿರಲಿ ಪ್ರೇಮ್ ಅವರ ಇತ್ತೀಚಿನ ಕಾರ್ಯಕ್ರಮದಲ್ಲಿ ಸಹನಾ ಹಾಗೂ ಪ್ರಜ್ವಲ್ ಭಾಗಿಯಾಗಿದ್ರು ಎಂದು ಅವರ ಸ್ನೇಹಿತರು ತಿಳಿಸಿದ್ದಾರೆ.

ವೇಗವಾಗಿ ಬಂದ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನೆಲಮಂಗಲ ನಗರದ ಕುಣಿಗಲ್ ಬೈಪಾಸ್ನಲ್ಲಿ ಅಪಘಾತ ಸಂಭವಿಸಿದೆ. ಬೈಕ್ನಲ್ಲಿ ಇಬ್ಬರು ಕುಣಿಗಲ್ ನಿಂದ ಬೆಂಗಳೂರಿಗೆ ಬರುತ್ತಿದ್ದರು ಎನ್ನಲಾಗ್ತಿದೆ.
ಅಪಘಾತಕ್ಕೆ ಕಾರಣವಾದ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಷಯ ತಿಳಿದು ಮೃತ ಪ್ರಜ್ವಲ್ ಹಾಗೂ ಸಹನಾ ಕುಟುಂಬಸ್ಥರು ಹಾಗೂ ಸ್ನೇಹಿತರು ಸ್ಥಳಕ್ಕೆ ಬಂದಿದ್ದಾರೆ