
ರಾಮನಗರ: ಶಬರಿಮಲೆ ಅಯ್ಯಪ್ಪನ ದರ್ಶನ ಮುಗಿಸಿ ವಾಪಸ್ ಬರುವಾಗ ಕನಕಪುರ ಮೂಲದ 18 ವರ್ಷದ ಅಯ್ಯಪ್ಪನ ಭಕ್ತನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.

j3tvkannada
ಮೃತ ಯುವಕನನ್ನು ಪ್ರಜ್ವಲ್ (18) ಎಂದು ಗುರುತಿಸಲಾಗಿದೆ. ಮೂಲತಃ ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದ ನಿವಾಸಿ ಪ್ರಜ್ವಲ್, ಕಳೆದ ಹಲವು ವರ್ಷಗಳಿಂದ ಬೆಂಗಳೂರಿನ ವಿಜಯನಗರದಲ್ಲಿ ವಾಸವಾಗಿದ್ದ. ಕಳೆದ ಎರಡು ದಿನಗಳ ಹಿಂದೆ ತಂದೆ ಹಾಗೂ ಸ್ನೇಹಿತರ ಜೊತೆ ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದರು.
ಅಯ್ಯಪ್ಪನ ದರ್ಶನ ಮುಗಿಸಿ, ಬೆಟ್ಟ ಇಳಿಯುವಾಗ ಪ್ರಜ್ವಲ್ಗೆ ಹೃದಯಾಘಾತವಾಗಿದೆ. ಕೂಡಲೇ ಸ್ಥಳೀಯರ ಸಹಾಯದಿಂದ ಯುವಕನನ್ನು ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಯಿತು. ಆದರೆ ಮಾರ್ಗದ ಮಧ್ಯೆಯೇ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಶಬರಿಮಲೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕನಕಪುರಕ್ಕೆ ತರಲು ಕುಟುಂಬಸ್ಥರು ಸಿದ್ಧತೆ ನಡೆಸಿದ್ದಾರೆ.