
ಬೆಂಗಳೂರು: ಗಾಳಿ ಇಲ್ಲ, ಮಳೆ ಇಲ್ಲ ಅಂದರೂ ಸಿ.ಎಂ ಸಿದ್ದರಾಮಯ್ಯ ಸರ್ಕಾರಿ ನಿವಾಸದ ಬಳಿಯೇ ಬೃಹತ್ ಮರವೊಂದು ಧರೆಗುರುಳಿ ಅನಾಹುತ ಸಂಭವಿಸಿದೆ.

j3tvkannada
ಬೃಹತ್ ಮರ ಧರೆಗುರುಳಿದ ಪರಿಣಾಮ ರಸ್ತೆಯಲ್ಲಿ ಹೋಗುತ್ತಿದ್ದ ಟಿ.ಟಿ ಹಾಗೂ ಇನೋವಾ ಮೇಲೆ ಮರದ ಕೊಂಬೆಗಳು ಬಿದ್ದಿವೆ. ಮರ ಬಿದ್ದ ಹಿನ್ನೆಲೆ ಪೊಲೀಸರು ರಸ್ತೆ ಬಂದ್ ಮಾಡಿದ್ದಾರೆ.
ಜೂ.15ರಂದು ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ ಕೊಂಬೆ ಬಿದ್ದು ಬಸವನಗುಡಿಯ ಬ್ರಹ್ಮ ಚೈತನ್ಯ ಮಂದಿರದ ಬಳಿ ಸವಾರ ಗಂಭೀರವಾಗಿ ಗಾಯಗೊಂಡಿದ್ದರು. 29 ವರ್ಷದ ಅಕ್ಷಯ್ ಗಂಭೀರವಾಗಿ ಗಾಯಗೊಂಡ ಸವಾರ. ಕೊಂಬೆ ಬೀಳುತ್ತಿದ್ದಂತೆ ನಿಯಂತ್ರಣ ತಪ್ಪಿ ಎದುರುಗಡೆ ನಿಲ್ಲಿಸಿದ್ದ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ.
ಶ್ರೀನಿವಾಸನಗರದ ನಿವಾಸಿಯಾಗಿರುವ ಅಕ್ಷಯ್ ರಾಜಾಜಿನಗರದಲ್ಲಿ ಕಂಪನಿಯೊಂದರಲ್ಲಿ ಹೆಚ್.ಆರ್ ಆಗಿ ಕೆಲಸ ಮಾಡುತ್ತಿದ್ದರು. ತಲೆಯ ಮಧ್ಯ ಭಾಗಕ್ಕೆ ತೀವ್ರ ಹಾನಿಯಾಗಿದೆ. ಮೂಗು, ಬಾಯಿ, ಕಿವಿಯಲ್ಲಿ ರಕ್ತಸ್ರಾವವಾಗಿದೆ. ಅಕ್ಷಯ್ ತಂದೆಗೆ ಡಯಾಲಿಸಿಸ್ ನಡೆಯುತ್ತಿದ್ದು, ಕುಟುಂಬಕ್ಕೆ ಅಕ್ಷಯ್ ಆಧಾರವಾಗಿದ್ದರು ಎಂದು ತಿಳಿದು ಬಂದಿದೆ.