
ಉತ್ತರ ಕನ್ನಡ(ಕಾರವಾರ): ಉತ್ತರ ಕನ್ನಡ ಜಿಲ್ಲೆಯ ಅರಬ್ಬಿ ಸಮುದ್ರದ ಕರಾವಳಿಯಲ್ಲಿ ಇಂದು (ಜೂ.19) ಹೆಚ್ಚಿನ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

j3tvkannada
3.7 ರಿಂದ 4.2 ಅಡಿ ಎತ್ತರದ ಅಲೆಗಳು ಏಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಂದು (ಜೂ.19) ಸಂಪ್ರದಾಯಿಕ ಮೀನುಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೇ ಸಣ್ಣ ಮತ್ತು ಮಧ್ಯಮ ದೋಣಿಗಳು ಸಮುದ್ರಕ್ಕಿಳಿಸದಂತೆ ಎಚ್ಚರಿಕೆ ನೀಡಲಾಗಿದೆ. ಕಾರವಾರದ ಮಾಜಾಳಿ ಗಡಿಯಿಂದ ಭಟ್ಕಳದ ಸಮುದ್ರ ತೀರದ ವರೆಗೆ ನಿರ್ಬಂಧ ಹೇರಲಾಗಿದೆ.
ಜೂ.1 ರಿಂದ ಎರಡು ತಿಂಗಳ ಕಾಲ ಮೀನುಗಾರಿಕೆ ನಿರ್ಬಂಧ ವಿಧಿಸಿದ್ದ ಜಿಲ್ಲಾಡಳಿತ, ಸಂಪ್ರದಾಯಿಕ ಮೀನುಗಾರಿಕೆ ಮಾಡುವವರಿಗೆ ಮಾತ್ರ ಅವಕಾಶ ನೀಡಿತ್ತು. ಅಲೆಗಳ ಅಬ್ಬರ ಹೆಚ್ಚಾಗುವ ಹಿನ್ನಲೆಯಲ್ಲಿ ಸಂಪ್ರದಾಯಿಕ ಮೀನುಗಾರರಿಗೆ ಹಾಗೂ ಸಮುದ್ರಕ್ಕಿಳಿಯುವ ಪ್ರವಾಸಿಗರಿಗೂ ನಿರ್ಬಂಧ ವಿಧಿಸಲಾಗಿದೆ.