
ಕೋಲಾರ: ಚಿಂತಾಮಣಿ-ಶಿಡ್ಲಘಟ್ಟ ರಸ್ತೆಯ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ ಮುಂಭಾಗದಲ್ಲಿ ಬೈಕ್ಗೆ ಕಾರೊಂದು ಡಿಕ್ಕಿಯಾಗಿ ಬೈಕ್ನ ಹಿಂಬದಿ ಸವಾರರೊಬ್ಬರು ಮೃತಪಟ್ಟಿದ್ದು, ಸವಾರನಿಗೆ ಕಾಲು ಮುರಿದು ಗಾಯಗೊಂಡಿದ್ದಾನೆ.

j3tvkannada
ಶಿಡ್ಲಘಟ್ಟ ತಾಲೂಕಿನ ದೊಡ್ಡ ದಾಸೇನಹಳ್ಳಿಯ ನಾರಾಯಣಸ್ವಾಮಿ (68) ಮೃತಪಟ್ಟವರು. ಕಾಲು ಮುರಿದುಕೊಂಡ ಬೈಕ್ ಸವಾರನನ್ನು ಮಧು ಎಂದು ಗುರುತಿಸಲಾಗಿದೆ. ರಾತ್ರಿ ಬೈಕ್ನಲ್ಲಿ ಶಿಡ್ಲಘಟ್ಟ ಕಡೆಯಿಂದ ಚಿಂತಾಮಣಿಗೆ ಬರುತ್ತಿದ್ದರು. ಬೆಂಗಳೂರಿನ ರಾಜಾಜಿನಗರದ ಕಾರೊಂದು ಚಿಂತಾಮಣಿಯ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದು, ನಂತರ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಹೋಗುವಾಗ ದುರ್ಘಟನೆ ನಡೆದಿದೆ.
ವೇಗವಾಗಿ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಗೊಂಡವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೆ ನಾರಾಯಣಸ್ವಾಮಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು. ಗಾಯಾಳು ಮಧು ಅವರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರಕ್ಕೆ ಕಳುಹಿಸಲಾಗಿದೆ. ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.