
ಹುಬ್ಬಳ್ಳಿ: ಹುಧಾ ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ್ ಘಾಳಿ ಅವರ ವರ್ಗಾವಣೆಯನ್ನು ತಡೆಯುವಂತೆ ಮತ್ತು ಸದ್ಯದ ಸ್ಥಾನದಲ್ಲಿ ಅವರನ್ನು ಮುಂದುವರೆಸುವಂತೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗುತ್ತಿಗೆದಾರರ ಸಂಘದಿಂದ ಹುಬ್ಬಳ್ಳಿಯ ಪಾಲಿಕೆ ಆವರಣದಲ್ಲಿಂದು ಪ್ರತಿಭಟನೆ ನಡೆಸಲಾಯಿತು.

ರುದ್ರೇಶ ಘಾಳಿಯವರು ಹುಧಾ ಮಹಾನಗರ ಪಾಲಿಕೆಯ ಸಮಸ್ಯೆಗಳನ್ನು ಮತ್ತು ಮಹಾನಗರದ ಎಲ್ಲಾ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹರಿಸುತ್ತಾ ಬರುತ್ತಿರುವ ಸಂದರ್ಭದಲ್ಲಿ ಅವರನ್ನು ವರ್ಗಾವಣೆ ಮಾಡಿದ್ದು ಸರಿಯಲ್ಲ ಎಂದು ಪ್ರತಿಭಟನಾಕಾರರು ಖಂಡಿಸಿದರು. ಈ ವೇಳೆ ಸಂಘದ ಅಧ್ಯಕ್ಷರಾದ ಮೋಹನ ಗೌಡರ, ಕಾರ್ಯದರ್ಶಿ ಪಂಪಣ್ಣ ಅಂಬಿಗೇರ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.