
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗಿರುವ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೆ.ಆರ್.ಎಸ್ ಡ್ಯಾಂ ಭರ್ತಿಗೆ ಕೇವಲ 7 ಅಡಿಗಳಷ್ಟೇ ಬಾಕಿಯಿದೆ. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಬಹುತೇಕ ಕೆರೆ ಕಟ್ಟೆಗಳು, ಜಲಾಶಯಗಳು ತುಂಬಿ ಹರಿದಿವೆ.

j3tvkannada
ಕೆ ಆರ್ ಎಸ್ ಜಲಾಶಯಕ್ಕೆ 23,473 ಕ್ಯೂಸೆಕ್ ಒಳ ಹರಿವು ಇದ್ದು, ನಿನ್ನೆಗಿಂತ ಇಂದು ಒಳ ಹರಿವಿನ ಪ್ರಮಾಣದಲ್ಲಿ ಕಡಿಮೆಯಾಗಿದೆ. ಸದ್ಯ ಡ್ಯಾಂನಲ್ಲಿ 39.847 ಟಿ.ಎಂ.ಸಿ ನೀರು ಸಂಗ್ರಹವಾಗಿದ್ದು, 1,252 ಕ್ಯೂಸೆಕ್ ಒಳ ಹರಿವು ಇದೆ.
124.80 ಅಡಿಗಳ ಗರಿಷ್ಠ ಮಟ್ಟ ಹೊಂದಿರುವ ಕೆ.ಆರ್.ಎಸ್ ಡ್ಯಾಂನಲ್ಲಿ 117.80 ಅಡಿ ನೀರಿದ್ದು, ಸಂಪೂರ್ಣ ಭರ್ತಿಗೆ 7 ಅಡಿಗಳಷ್ಟೇ ಬಾಕಿಯಿದೆ. ಹಳೆ ಮೈಸೂರು ಭಾಗದ ಜೀವನಾಡಿ ಕೆ.ಆರ್.ಎಸ್ ಡ್ಯಾಂ ಭರ್ತಿಯಾಗುತ್ತಿರುವುದು ರೈತರಲ್ಲಿ ಸಂತಸ ಮೂಡಿಸಿದೆ.