
ಹಾವೇರಿ: ಹುಬ್ಬಳ್ಳಿ ನೇಹಾ ಹಿರೇಮಠ ರೀತಿಯಲ್ಲೇ, ಹಾವೇರಿ ಜಿಲ್ಲೆಯಲ್ಲಿ ಸ್ವಾತಿ (22) ವರ್ಷದ ಯುವತಿಯ ಬರ್ಬರ ಹತ್ಯೆಯಾಗಿದೆ. ಕಳೆದ ಮಾರ್ಚ್ 6 ರಂದು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಪತ್ತೆಪುರ ಬಳಿ ಅಪರಿಚಿತ ಯುವತಿ ಶವ ಪತ್ತೆಯಾಗಿತ್ತು. ಮೊದಲಿಗೆ ಯು.ಡಿ.ಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಹಲಗೇರಿ ಠಾಣೆ ಪೊಲಿಸರು ಯುವತಿ ಶವದ ಮರಣೋತ್ತರ ಪರೀಕ್ಷೆ ಮಾಡಿ ಅಂತ್ಯಸಂಸ್ಕಾರ ಕೂಡ ಮಾಡಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಯುವತಿಯನ್ನು ಯಾರೋ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಕೊಲೆಯ ನಂತರ ಮೃತ ದೇಹವನ್ನು ತುಂಗಭದ್ರಾ ನದಿಯಲ್ಲಿ ಬಿಸಾಡಿ ಹೋಗಿರುತ್ತಾರೆ. ಕೂಡಲೇ ತನಿಖೆ ಆರಂಭಿಸಿದ ಪೊಲೀಸರಿಗೆ ಅದು ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಎಂಬ ಯುವತಿ ಎನ್ನುವುದು ಗೊತ್ತಾಗಿದೆ. ತನಿಖೆ ತೀವ್ರಗೊಳಿಸಿದಾಗ ,ಹಂತಕ ನಯಾಜ್ ಹಾಗೂ ಆತನ ಸಹಚರರು, ಎನ್ನುವುದು ದೃಢಪಟ್ಟಿದೆ.

ಆರೋಪಿ ನಯಾಜ್ ಹಿರೇಕೇರೂರು ತಾಲೂಕು ಹಳೆ ವಿರಾಪುರ ಗ್ರಾಮದವನು. ಕೊಲೆಯಾದ ಸ್ವಾತಿ ಹಾಗು ಕೊಲೆ ಮಾಡಿದ ಮೂವರು ಆರೋಪಿಗಳು, ಹೋರಿ ಬೆದರಿಸೋ ಸ್ಪರ್ಧೆಅಲ್ಲಿ ಹಾಜರಾಗುತ್ತಿದ್ದರು. ಸ್ವಾತಿಗೆ ಹೋರಿ ಬೆದರಿಸೋ ಸ್ಪರ್ಧೆ ಕ್ರೇಜ್ ಇತ್ತು. ಈ ವೇಳೆ ನಯಾಜ್ , ವಿನಯ್ ದುರ್ಗಾಚಾರಿ ನಡುವೆ ಸ್ನೇಹ ಬೆಳೆದಿದೆ. ಬಳಿಕ ಆರೋಪಿ ನಯಾಜ್ ಹಾಗೂ ಸ್ವಾತಿ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ನಯಾಜ್ ಸ್ವಾತಿಯನ್ನು ಬಿಟ್ಟು ತಮ್ಮ ಧರ್ಮದ ಯುವತಿ ಜೊತೆ ಮದುವೆಯಾಗಲು ಬಯಸಿದ್ದ. ಇದರಿಂದ ರೊಚ್ಚಿಗೆದ್ದಿದ್ದ ಸ್ವಾತಿ, ನನಗೆ ಮೋಸ ಮಾಡಬೇಡ ಎಂದು ಜಗಳ ಮಾಡಿದ್ದಾಳೆ. ಪ್ರಕರಣಕ್ಕೆ ಸಂಬಂದಿಸಿದಂತೆ ನಯಾಜ್ ಹಾಗೂ ವಿನಯ್ , ದುರ್ಗಾಚಾರಿ ಎಂಬ ಯುವಕರೇ ಸ್ವಾತಿ ಹತ್ಯೆ ಗೈದವರು ಎಂದು ತನಿಖೆ ವೇಳೆ ತಿಳಿದುಬಂದಿದೆ. ಈ ಸಂಬಂಧ ಆರೋಪಿಗಳ ವಿರುದ್ಧ ಹಿಂದೂ ಪರ ಸಂಘಟನೆಗಳಿಂದ, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದೀಗ ನಯಾಜ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.