
ದಾವಣಗೆರೆ: ದರೋಡೆಕೋರರ ಗ್ಯಾಂಗ್ ಬ್ಯಾಂಕ್ ದರೋಡೆಗೆ ಆಗಮಿಸಿದೆ, ಎನ್ನುವ ಖಚಿತ ಮಾಹಿತಿ ಮೇರೆಗೆ ಹೊನ್ನಾಳಿ ಬಳಿ ಪೊಲೀಸರು ವಾಹನ ತಪಾಸಣೆ ನಡೆಸಿದ್ದಾರೆ. ಈ ವೇಳೆ, 7 ಜನ ಹರಿಹರದ ಕಡೆಯಿಂದ ನ್ಯಾಮತಿ ಕಡೆಗೆ ಎರಡು ಕಾರುಗಳಲ್ಲಿ ಹೋಗುತ್ತಿದ್ದ ಕಾರನ್ನು, ಹೊನ್ನಾಳಿ ಬಳಿಯ ಚೆಕ್ಪೋಸ್ಟ್ನಲ್ಲಿ ಪೊಲೀಸರು ತಡೆಯಲು ಯತ್ನಿಸಿದ್ದಾರೆ. ಈ ವೇಳೆ ಅವರು ಕಾರನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದಾರೆ. ಕಾರನ್ನು ಹಿಂಬಾಲಿಸಿದ ಪೊಲೀಸರು ಅರಬಘಟ್ಟ ಬಳಿ ತಡೆದು ನಿಲ್ಲಿಸಿ ವಿಚಾರಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಅರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಅಲ್ಲದೇ ಕಾನ್ಸ್ಟೇಬಲ್ ಅನಂದ್ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.

ದರೋಡೆಕೋರರು ದಾಳಿ ನಡೆಸುತ್ತಿದ್ದಂತೆ ಆತ್ಮರಕ್ಷಣೆಗಾಗಿ ಇನ್ಸ್ಪೆಕ್ಟರ್ ರವಿಯವರು ಅರೋಪಿ ಗುಡ್ಡು ಅಲಿಯಾನ್ ಗುಡು ಖಾಲಿಯಾ ಎಂಬಾತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಅಲ್ಲದೇ ಆತನ ಜೊತೆಗಿದ್ದ ಉತ್ತರ ಪ್ರದೇಶ ಮೂಲದ ಹಸ್ರತ್ ಅಲಿ, ಅಸಾಂ ಯಾನೆ ಟನ್ ಟನ್, ಕಮರುನ್ ಯಾನೆ ಬಾಬು ಸೆರಲಿಯನ್ನು ಬಂಧಿಸಿದ್ದಾರೆ. ಗ್ಯಾಂಗ್ನ ನಟೋರಿಯಸ್ ಲೀಡರ್ ರಾಜಾರಾಮ್, ಬಾಬುಷಾ, ಹಾಗೂ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಆಪೀಜ್ ಪರಾರಿಯಾಗಿದ್ದು, ಪೊಲೀಸರು ಪರಾರಿಯಾದ ಅರೋಪಿಗಳ ಬಂಧನಕ್ಕೆ ಎರಡು ತಂಡ ರಚಿಸಿ ತೀವ್ರಶೋಧ ನಡೆಸುತ್ತಿದ್ದಾರೆ.