
ಕಲಬುರಗಿ: ಕಲಬುರಗಿ ನಗರದ ರಾಜಾಪುರ ಬಡಾವಣೆಯ ಹೋಟೆಲ್ ಮುಂಭಾಗದಲ್ಲಿ ತಡರಾತ್ರಿ ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ರೇವಣಸಿದ್ದಪ್ಪ ಪಾಳೇಕಾರ್ (33) ಕೊಲೆಯಾದ ಯುವಕ.

ಸ್ನೇಹಿತರ ಜೊತೆಗೆ ಸಿಗರೇಟ್ ಸೇದಲು ಹೋದಾಗ ತಮ್ಮ ತಮ್ಮಲ್ಲೇ ಮಾತಿನ ಚಕಮಕಿ ಉಂಟಾಗಿದೆ. ಮಾತು ವಿಕೋಪಕ್ಕೆ ತಿರುಗಿ, ಕೊಲೆಗೆ ಕಾರಣವಾಗಿದೆ ಎನ್ನಲಾಗಿದೆ. ಹಳೇ ವೈಶಮ್ಯದ ಹಿನ್ನೆಲೆ ಕೊಲೆ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದೆ. ಕೊಲೆಯ ದೃಶ್ಯ ಸಿಸಿಟಿವಿ ಕ್ಯಾಮೆರಾಯಲ್ಲಿ ಸೆರೆಯಾಗಿದೆ. ಘಟನೆಯ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಆರೋಪಿಗಳಿಗಾಗಿ ಪೊಲೀಸ್ ಹುಡುಕಾಟ ನಡೆಸಿದ್ದಾರೆ.