
ಕೊಪ್ಪಳ: ಗಂಗಾವತಿಯಲ್ಲಿ ವಿದೇಶಿ ಮಹಿಳೆ ಹಾಗೂ ಇಬ್ಬರ ಮೇಲೆ ಅತ್ಯಾಚಾರ, ಮಾಡಿ ಒಬ್ಬರನ್ನು ಕಾಲುವೆಗೆ ತಳ್ಳಿ ಕೊಲೆ ಮಾಡಿರುವ ಪ್ರಕರಣದ ಬಳಿಕ ವಿಶ್ವವಿಖ್ಯಾತ ಹಂಪಿ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಕೊಪ್ಪಳ ಜಿಲ್ಲಾಡಳಿತ ಸರ್ಕಾರದ ನಿರ್ದೇಶನದನ್ವಯ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಮಾಹಿತಿ ಕೇಂದ್ರವನ್ನು ಸಹ ತೆರೆಯಲಾಗಿದೆ.

j3tvkannada.in
“ಕೊಪ್ಪಳ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಮಾಹಿತಿ, ಸುರಕ್ಷತೆ ಹಾಗೂ ಭದ್ರತೆಯ ಹಿತದೃಷ್ಟಿಯಿಂದ ಪ್ರವಾಸಿ ಮಾಹಿತಿ ಕೇಂದ್ರ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ” ಎಂದು ಹೇಳಿದ್ದಾರೆ. ಜಿಲ್ಲೆ ಐತಿಹಾಸಿಕ ಪ್ರೇಕ್ಷಣಿಯ ಸ್ಥಳಗಳನ್ನು ಹೊಂದಿದ್ದು. ದೇಶ ಹಾಗೂ ವಿದೇಶ ಸೇರಿದಂತೆ ಹಲವಾರು ಪ್ರವಾಸಿಗರು ಜಿಲ್ಲೆಗೆ ಭೇಟಿ ನೀಡುತ್ತಾರೆ. ಪ್ರವಾಸಿಗರಿಗೆ ಮಾಹಿತಿ ನೀಡಲು, ಸುರಕ್ಷತೆ, ಹಾಗೂ ಜಾಗೃತಿ ಕಲ್ಪಿಸುವ ಹಿತದೃಷ್ಟಿಯಿಂದ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಒಂದು ಪ್ರವಾಸಿ ಮಾಹಿತಿ ಕೇಂದ್ರವನ್ನು ಆರಂಭಿಸಲಾಗಿದೆ.