
ಕಲಬುರುಗಿ: ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಇತರ ವೈದ್ಯಕೀಯ ಸಂಸ್ಥೆಗಳಲ್ಲಿ ಇಂಥ 100 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ ನೀಡಿದ ತಂದೆ-ತಾಯಂದಿರನ್ನೇ ಅನಾಥರನ್ನಾಗಿ ಮಾಡುತ್ತಿರುವ ಪರಿಪಾಠಲು ಹೆಚ್ಚಾಗಿದೆ. ಇಂಥ ಅಮಾನವೀಯ ಕೃತ್ಯಗಳನ್ನು ತಡೆಯಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ. ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್, ತೀವ್ರ ಬೇಸರ ವ್ಯಕ್ತಪಡಿಸಿದರಲ್ಲದೇ, ಕೂಡಲೇ ವಿಲ್ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಕ್ರಮ ಕೈಗೊಳ್ಳಲು ಸಚಿವರು ಆದೇಶ ನೀಡಿದ್ದಾರೆ.