ಬೆಂಗಳೂರು : ಅವಲಳ್ಳಿ ಬಳಿಯ ಆಶ್ರಯ ಕಾಲೋನಿ ಹತ್ತಿರ ಇರುವ ಟೊಯೋಟೊ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್ ಫ್ಯಾಕ್ಟರಿ ಒಳಗಡೆ ಅಗ್ನಿ ಅವಘಡದಲ್ಲಿ ಕೆಮಿಕಲ್ ಮತ್ತು ಸ್ಟಿಕರಿಂಗ್ ವಸ್ತುಗಳು ಸುಟ್ಟು ಕರಕಲಾಗಿದೆ.

ಮಧ್ಯಾಹ್ನ ಸುಮಾರು 2.30 ಸಮಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ವಸ್ತುಗಳನ್ನು ಪ್ಯಾಕ್ ಮಾಡಿ ಒಂದು ಕಡೆ ಇರಿಸಲಾಗಿತ್ತು. ಆ ಸ್ಥಳದಲ್ಲಿ ಮಧ್ಯಾಹ್ನ 2 ಗಂಟೆಯ ವೇಳೆ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ಹತ್ತಿ ಉರಿಯುವುದನ್ನು ಕಂಡ ಸ್ಥಳೀಯರು ಅಗ್ನಿಶಾಮಕ ದಳದ ನಿಯಂತ್ರಣ ಕೊಠಡಿ ಹಾಗೂ ಪೊಲೀಸ್ ಸಹಾಯವಾಣಿಗೆ ಮಾಹಿತಿ ನೀಡಿದ್ದರು. ಕರ್ನಾಟಕ ರಾಜ್ಯ ಅಗ್ನಿ ಶಾಮಕ ದಳ ನಾಲ್ಕು ವಾಹನಗಳೊಂದಿಗೆ ಸ್ಥಳಕ್ಕೆ ಬಂದು ಸುಮಾರು 2 ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೊಣನಕುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ‘ಅಗ್ನಿ ಅವಘಡಕ್ಕೆ ಕಾರಣ ಪತ್ತೆಯಾಗಿಲ್ಲ. ಬಿಸಿಲ ಝಳದಿಂದ ಬೆಂಕಿ ಹೊತ್ತಿಕೊಂಡಿತ್ತೇ ಅಥವಾ ಕಿಡಿಗೇಡಿಗಳ ಕೃತ್ಯವೇ ಎಂಬುದು ತನಖೆಯ ನಂತರವೇ’ ತಿಳಿಯಬೇಕಿದೆ.