ಬಳ್ಳಾರಿ: ಇತ್ತೀಚೆಗೆ ಚಿಕ್ಕಬಳ್ಳಾಪುರದಲ್ಲಿ ಕೋಳಿ ಜ್ವರ ಕಾಣಿಸಿಕೊಂಡಿತ್ತು, ಆದರೆ ಇದೀಗ ಗಡಿ ಜಿಲ್ಲೆ ಬಳ್ಳಾರಿಯಲ್ಲೂ ಕೂಡಾ ಕೋಳಿ ಜ್ವರದ ಆತಂಕ ಮನೆ ಮಾಡಿದೆ. ಸಂಡೂರ ತಾಲೂಕಿನ ಕುರೇಕುಪ್ಪ ಗ್ರಾಮದ ಬಳಿಯ ಸರ್ಕಾರಿ ಪಾಲ್ಟ್ರಿ ಬಳ್ಳಾರಿಯ ಸಂಡೂರು ತಾಲ್ಲೂಕಿನಲ್ಲಿ ಹಕ್ಕಿ ಜ್ವರದಿಂದ 2400 ಕೋಳಿಗಳು ಸಾವನ್ನಪ್ಪಿವೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾಹಿತಿ ನೀಡಿದ್ದಾರೆ. ಫೆಬ್ರವರಿ 21 ರಿಂದ ಇಲ್ಲಿಯವರೆಗೆ ಹಂತ ಹಂತವಾಗಿ 2400 ಕೋಳಿಗಳ ಮೃತಪಟ್ಟಿವೆ.

ಸರ್ಕಾರ,ತೋರಣಗಲ್ಲು, ಕುರೇಕುಪ್ಪ, ವಡ್ಡು, ತಾಳೂರು, ಬಸಾಪುರ, ದರೋಜಿ, ದೇವಲಾಪುರ ಗ್ರಾಮಗಳು ಸೇರಿದಂತೆ ಈ ವ್ಯಾಪ್ತಿಯ 10 ಕಿಲೋ ಮೀಟರ್ ಪ್ರದೇಶವನ್ನ ಕಣ್ಗಾವಲು ಪ್ರದೇಶವೆಂದು ಗುರುತಿಸಲಾಗಿದೆ. ಕೋಳಿಗಳನ್ನು ನಾಶಪಡಿಸುವ ಮೂಲಕ ಸೋಂಕು ಹರಡುವುದನ್ನು ತಡೆಯಲು ಪ್ರಯತ್ನಿಸಲಾಗುತ್ತಿದೆ.
ಸತ್ತ ಕೋಳಿಗಳ ಮಾದರಿ ಸಂಗ್ರಹಿಸಿ ಮಧ್ಯಪ್ರದೇಶದ ಭೂಪಾಲ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಪ್ ಹೈ ಸೆಕ್ಯೂರಿಟಿ ಅನಿಮಲ್ ಥಿಸೀಸ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪ್ರಯೋಗಾಲಯದ ವರದಿ ಬಂದ ಬಳಿಕ ಕೋಳಿಗಳಲ್ಲಿ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ. ಆಂಧ್ರಪ್ರದೇಶ, ತೆಲಂಗಾಣದಿಂದ ಸೋಂಕು ಹರಡಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಹಕ್ಕಿ ಜ್ವರ ದೃಢ ಪಟ್ಟ ಹಿನ್ನೆಲೆಯಲ್ಲಿ ಬಳ್ಳಾರಿ ಜನರು ಆತಂಕಗೊಂಡಿದ್ದಾರೆ. ಇನ್ನು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಜಿಲ್ಲೆಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಂಡಿವೆ.