
ಮಂಗಳೂರು: ಕೇರಳ ರಾಜ್ಯದ ಕೊಳಚೆ ತ್ಯಾಜ್ಯವನ್ನು ಮಂಗಳೂರಿಗೆ ತಂದು ಸುರಿಯಲಾಗುತ್ತಿದೆ. ಮಂಗಳೂರು ಪಾಲಿಕೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ, ಕಚೇರಿಯ ವಿಶೇಷ ಕರ್ತವ್ಯಾಧಿಕಾರಿ ಪತ್ರ ಬರೆದಿದ್ದು, “ಅಗತ್ಯ ಕ್ರಮ ಕೈಗೊಳ್ಳುವಂತೆ” ಸಿ.ಎಂ ಸೂಚನೆ ನೀಡಿದ್ದಾರೆ.

ಈ ಕುರಿತು ಕ್ರಮ ಕೈಗೊಂಡ ಬಗ್ಗೆ ಸರ್ಕಾರಕ್ಕೆ ಮಂಗಳೂರು ಪಾಲಿಕೆ ಉತ್ತರ ನೀಡಿದ್ದು, ತ್ಯಾಜ್ಯ ಸುರಿದ ವಾಹನಗಳಿಗೆ ದಂಡ ವಿಧಿಸಲಾಗಿದೆ. ಹಾಗೇ, ಪೊಲೀಸ್ ಇಲಾಖೆಗೂ ದೂರು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆ ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ” ಎಂದು ಸರ್ಕಾರಕ್ಕೆ ಮಂಗಳೂರು ಪಾಲಿಕೆ ಆಯುಕ್ತರು ಪತ್ರ ಬರೆದಿದ್ದಾರೆ.