
ಬೀದರ್: ಶಾರ್ಟ್ ಸರ್ಕ್ಯೂಟ್ನಿಂದ ಸರ್ಕಾರಿ ಬಸ್ಸಿಗೆ ಬೆಂಕಿ ತಗುಲಿ ಹೊತ್ತಿ ಉರಿದಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕಪ್ಪಿಕೇರಿ ಕ್ರಾಸ್ ಬಳಿ ನಡೆದಿದೆ. ರಾದ್ ಘಟಕಕ್ಕೆ ಸೇರಿದ ಎಂ 38 ಈ 1033 ನಂಬರ್ನ ಸರ್ಕಾರಿ ಬಸ್ ಬೀದರ್ನಿಂದ ಔರಾದ್ಗೆ ಹೋಗುತ್ತಿತ್ತು. ಈ ವೇಳೆ ಶಾರ್ಟ್ ಸರ್ಕ್ಯೂಟ್ನಿಂದ ಬಸ್ಗೆ ಬೆಂಕಿ ತಗುಲಿದೆ.

ಪರಿಣಾಮ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬಸ್ಸಿಗೆ ಬೆಂಕಿ ತಗಲುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಕೂಡಲೇ ಕೆಳಗಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಳೆಯ ಬಸ್ ಸಂಚಾರಕ್ಕೆ ಅನುಮತಿ ನೀಡಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಜನರು ಸರ್ಕಾರಕ್ಕೆ ಹಿಡಿ ಶಾಪಹಾಕಿದ್ದಾರೆ.