
ವಿಜಯಪುರ: ಮುದ್ದೇಬಿಹಾಳದ ತಂಗಡಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮರಗೋಳ ಗ್ರಾಮದಲ್ಲಿನ ಕೃಷ್ಣಾ ನದಿ ತೀರದಲ್ಲಿ ಕಪ್ಪು ಮಣ್ಣನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ, ಎಂಬ ದೂರನ್ನು ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕಾಯುಕ್ತ ಇನ್ಸ್ಪೆಕ್ಟರ್ ಆನಂದರವರು, ಸ್ಥಳದಲ್ಲಿ ಒಂದು ಹಿಟಾಚಿ, ಎರಡು ಟಿಪ್ಪರ್ ಕಂಡು ಬಂದಿದ್ದು ವಶಕ್ಕೆ ಪಡೆಯಲಾಗಿದೆ. ಹಾಗೂ 400ಕ್ಕೂ ಹೆಚ್ಚು ಟಿಪ್ಪರ್ನಷ್ಟು ಮಣ್ಣನ್ನು ಸಾಗಿಸಲಾಗಿದೆ ಎಂದು ಅಂದಾಜಿಸಲಾಗಿದೆ. ಸಂಬಂಧಿಸಿದ ಅಧಿಕಾರಿಗಳಿಂದ ಅನುಮತಿ ಪಡೆದಿಲ್ಲವೆಂಬುದು ಅಲ್ಲಿದ್ದವರನ್ನು ವಿಚಾರಿಸಿದಾಗ ತಿಳಿದು ಬಂದಿದೆ. ಈ ಕುರಿತು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿ ಕ್ರಮ ಕೈಗೊಳ್ಳಲಾಗುವುದು, ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.