
ಕಾರವಾರ : ಯುಗಾದಿ ಮತ್ತು ರಂಜಾನ್ ಹಬ್ಬಗಳು ಒಟ್ಟಾಗಿ ಬಂದಿವೆ. ಅಲ್ಲದೇ ವಾರಾಂತ್ಯವೂ ಆದ ಕಾರಣ ಪ್ರಯಾಣ ನಡೆಸುವ ಜನರ ಸಂಖ್ಯೆ ಹೆಚ್ಚಾಗಿರುತ್ತದೆ. ಸಾಲು ಸಾಲು ರಜೆ ಹಿನ್ನಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಪ್ಪಿಸಲು ನೈಋತ್ಯ ರೈಲ್ವೆ ಒಂದು ಟ್ರಿಪ್ ವಿಶೇಷ ರೈಲು ಓಡಿಸುತ್ತಿದೆ. ಮೈಸೂರು-ಕಾರವಾರ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರ ನಡೆಸಲಿದೆ, ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು ಮತ್ತು ಕಾರವಾರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು ಓಡಿಸಲಾಗುತ್ತದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ಹೇಳಿದೆ. ಪ್ರಯಾಣಿಕರು ವಿಶೇಷ ರೈಲು ಉಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.