
ಬೆಳಗಾವಿ: ರಾಜ್ಯದ ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ಮತ್ತು ಟೆಕ್ನಿಷಿಯನ್ ಹುದ್ದೆಗಳನ್ನು ಶೀಘ್ರದಲ್ಲೇ ನೇಮಕಾತಿ ಮಾಡಲಾಗುವುದು. ಆಗಸ್ಟ್ ತಿಂಗಳ ಬಳಿಕ ತಜ್ಞ ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು.

ರಾಮದುರ್ಗ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗುಂಡೂರಾವ್ ರವರು, ‘ರಾಮದುರ್ಗ ಆಸ್ಪತ್ರೆಯಲ್ಲಿಯೂ ವೈದ್ಯರ ನೇಮಕ ಮಾಡಲಾಗುವುದು’ ಎಂದು ತಿಳಿಸಿದರು. ರಾಮದುರ್ಗ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿ, ಹೆರಿಗೆ, ಐಸಿಯು, ಹೊರ ರೋಗಿ ವಾರ್ಡ್ಗೆ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯ ಕಚೇರಿಗೆ ತೆರಳಿ ದಾಖಲೆಗಳನ್ನು ಪರಿಶೀಲಿಸಿ ಆಸ್ಪತ್ರೆಯ ಕಾರ್ಯ ಚಟುವಟಿಕೆ ಬಗ್ಗೆ ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರ ಕೊರತೆ, ತಜ್ಞ ವೈದ್ಯರ ಕೊರತೆ ಹಾಗೂ ಎಕ್ಸರೇ ಮತ್ತಿತರ ವಿಭಾಗಗಳಲ್ಲಿ ಟೆಕ್ನಿಷಿಯನ್ಗಳ ಹುದ್ದೆಗಳು ಖಾಲಿ ಇರುವ ಬಗ್ಗೆ ಸಚಿವರ ಗಮನಕ್ಕೆ ತರಲಾಯಿತು. ಇದಕ್ಕೆ ಸ್ಪಂದಿಸಿದ ಸಚಿವರು ಅರಿವಳಿಕೆ ವೈದ್ಯರ ನೇಮಕಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚನೆ ನೀಡಿದರು.