
ಹಾವೇರಿ: ಇಲ್ಲಿಯ ಕೇಂದ್ರ ಬಸ್ ನಿಲ್ದಾಣದ ಕಾಂಪ್ಲೆಕ್ಸ್ನಲ್ಲಿರುವ ಎರಡು ಮಳಿಗೆಗಳಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಗೃಹೋಪಯೋಗಿ ವಸ್ತುಗಳು ಹಾಗೂ ಪೀಠೋಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

j3tvkannada
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನಿಲ್ದಾಣಕ್ಕೆ ಹೊಂದಿಕೊಂಡಂತೆ ಕಾಂಪ್ಲೆಕ್ಸ್ ನಿರ್ಮಿಸಲಾಗಿದೆ. ಮಳಿಗೆಗಳನ್ನು ಬಾಡಿಗೆಗೆ ನೀಡಲಾಗಿದೆ. ಎರಡು ಮಳಿಗೆಗಳನ್ನು ಬಾಡಿಗೆ ಪಡೆದಿದ್ದ ವ್ಯಾಪಾರಿಯೊಬ್ಬರು, ಗೃಹೋಪಯೋಗಿ ವಸ್ತುಗಳು ಹಾಗೂ ಪೀಠೋಪಕರಣ ಮಾರುತ್ತಿದ್ದರು. ಇದೇ ಮಳಿಗೆಯಲ್ಲಿ ಭಾನುವಾರ ಸಂಜೆ 6.30 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಕೆಲ ನಿಮಿಷಗಳಲ್ಲೇ ಬೆಂಕಿ ಹೊತ್ತಿ ಉರಿದಿದೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.