ಆನೇಕಲ್ ತಾಲ್ಲೂಕಿನ ನಾಗನಾಯಕನಹಳ್ಳಿಯಲ್ಲಿ ಭಾನುವಾರ ಬೆಳಗ್ಗೆ ವಿದ್ಯುತ್ ತಂತಿ ತಗುಲಿ ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಗನಾಯಕನಹಳ್ಳಿಯ ಮುನಿವೆಂಕಟಪ್ಪ ಮೃತ ರೈತ. ಮೃತಪಟ್ಟ ಸಂಬಂಧಿಕರೊಬ್ಬರ ಮನೆಯಲ್ಲಿ ಇಡೀ ರಾತ್ರಿ ಭಜನೆ ಮಾಡಿದ್ದ ಮುನಿವೆಂಕಟಪ್ಪ ಬೆಳಗ್ಗೆ ಕಸ ಹಾಕಿ ಮನೆಗೆ ಹಿಂದಿರುಗುತ್ತಿದ್ದಾಗ ನೆಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.