

ರಾಮನಗರ : ಬಿಡದಿಯ ಕೇತಗಾನಹಳ್ಳಿ ಬಳಿ ಮಾಜಿ ಸಿಎಂ ಹಾಗೂ ಸಚಿವ ಹೆಚ್ ಡಿ ಕುಮಾರಸ್ವಾಮಿ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಆರೋಪವಿದೆ. ಹೆಚ್ಡಿಕೆ ತೋಟದಲ್ಲಿ ಒತ್ತುವರಿ ತೆರವು (Encroachment Clearance) ಕಾರ್ಯ ಕೂಡ ನಡೆಯುತ್ತಿತ್ತು. ತೆರವಿನ ವಿರುದ್ಧ ಕುಮಾರಸ್ವಾಮಿ ಹೈಕೋರ್ಟ್ಮೆಟ್ಟಿಲೇರಿ ಸ್ಟೇ ತಂದಿದ್ದಾರೆ. ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಈ ಸಂಬಂಧ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎನ್.ಎಸ್.ಸಂಜಯಗೌಡ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ರಾಮನಗರ ತಹಶೀಲ್ದಾರ್ ಅವರು ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್ ಆದೇಶ ನೀಡಿದೆ.