
ಬೆಂಗಳೂರು ಗ್ರಾಮಾಂತರ: ಬಸ್, ಮೆಟ್ರೋ ದರ ಏರಿಕೆ ಬಳಿಕ ಇದೀಗ ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡುವ ಮೂಲಕ ರಾಜ್ಯದ ಜನತೆಗೆ ದೊಡ್ಡ ಶಾಕ್ ಕೊಟ್ಟಿದೆ. ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ರಾಜ್ಯದ ಜನತೆಗೆ ದರ ಏರಿಕೆಯ ಬಿಸಿ ಮುಟ್ಟಿಸಿದೆ.

ಪ್ರತಿ ಲೀಟರ್ ನಂದಿನಿ ಹಾಲಿನ ದರ 4 ರೂ. ಹೆಚ್ಚಳ ಮಾಡಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ನಾಳೆಯಿಂದಲೇ (ಮಾ.28) ಪರಿಷ್ಕೃತ ದರ ಜಾರಿಯಾಗಲಿದೆ.
ನೀಲಿ ಪ್ಯಾಕೆಟ್ ಹಾಲು – 44 ರೂ ನಿಂದ 48 ರೂ
ಆರೆಂಜ್ ಪ್ಯಾಕೆಟ್ ಹಾಲು – 54 ರೂ. ನಿಂದ 58 ರೂ.
ಸಮೃದ್ಧಿ ಹಾಲಿನ ಪ್ಯಾಕೆಟ್– 56 ರೂ. ನಿಂದ 60 ರೂ.
ಗ್ರೀನ್ ಸ್ಪೇಷಲ್ – 54 ರೂ. ನಿಂದ 58 ರೂ.
ನಾರ್ಮಲ್ ಗ್ರೀನ್– 52 ರೂ. ನಿಂದ 56 ರೂ.