
ವಿಜಯನಗರ: ತುಮಕೂರು ಜಿಲ್ಲೆ ಗುಬ್ಬಿ ತಹಶೀಲ್ದಾರ್ ಕಚೇರಿ ಬಳಿ ಶಾಂತಿಯುತ ಪ್ರತಿಭಟನೆ ಮುಗಿಸಿ ತೆರಳುತ್ತಿದ್ದ ರೈತರ ಮೇಲೆ ಕಾಂಗ್ರೆಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ಕ್ರಿಮಿನಲ್ ಬೆದರಿಕೆ ಹಾಕಿದ್ದನ್ನು ಕರ್ನಾಟಕ ಪ್ರಾಂತ ರೈತ ಸಂಘದ ಹೊಸಪೇಟೆ ತಾಲ್ಲೂಕು ಘಟಕದ ಸಂಚಾಲಕ ಎನ್.ಯಲ್ಲಾಲಿಂಗ ಖಂಡಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಬಗರ್ ಹುಕುಂ ಸಾಗುವಳಿದಾರರ ವಿಚಾರದಲ್ಲಿ ರೈತರ ದಾರಿ ತಪ್ಪಿಸುವ ಗುಬ್ಬಿ ತಹಶೀಲ್ದಾರ್ ಹೇಳಿಕೆ ವಾಪಸ್ಸು ಪಡೆಯಬೇಕು ,ಎಂದು ಒತ್ತಾಯಿಸಿ ಹಾಗೂ ಶಾಂತಿಯುತ ಪ್ರತಿಭಟನೆ ನಡೆದಾಗ ಇಂತಹ ಹೇಳಿಕೆ ನೀಡುವುದು ಸರಿಯಲ್ಲ, ಶಾಸಕರ ವರ್ತನೆಯನ್ನು ಸಂಘ ಖಂಡಿಸುತ್ತದೆ ಎಂದು ಹೇಳಿದ್ದಾರೆ.