
ದಾವಣಗೆರೆ: ದಾವಣಗೆರೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮುಖ್ಯವಾದ ಮಾಹಿತಿಯೊಂದಿದೆ. ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಏಪ್ರಿಲ್ 21 ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 9,000 ರೂ. ವೇತನವನ್ನು ನಿಗದಿ ಮಾಡಲಾಗಿದೆ.
ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ 18 ರಿಂದ 45 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು ಹಾಗೂ ಕಂಪ್ಯೂಟರ್ ಜ್ಞಾನವುಳ್ಳರಾಗಿರಬೇಕು.

ದಾವಣಗೆರೆ ತಾಲೂಕು ಹುಚ್ಚವ್ವನಹಳ್ಳಿ ಮತ್ತು ಚನ್ನಗಿರಿ ತಾಲೂಕಿನ ವಡ್ನಾಳ್ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರುವ ವಿಕಲಚೇತನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಛೇರಿ, ದೇವರಾಜ್ ಅರಸ್ ಬಡಾವಣೆ, ‘ಬಿ’ ಬ್ಲಾಕ್, ಶಿವಾಲಿ ಟಾಕೀಸ್ ಹತ್ತಿರ, ದಾವಣಗೆರೆ ಇವರನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-263939 ಹಾಗೂ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ದಾವಣಗೆರೆ ಇವರನ್ನು 9590829024 ಮತ್ತು ಚನ್ನಗಿರಿ 9945738141 ಇವರನ್ನು ಸಂಪರ್ಕಿಸಬಹುದು.