
ಗದಗ: ಆರೋಗ್ಯಕರ ಆರಂಭಗಳು ಭರವಸೆಯ ಭವಿಷ್ಯ ಎಂಬುದು ಈ ವರ್ಷದ ವಿಶ್ವ ಆರೋಗ್ಯ ದಿನಾಚರಣೆಯ ಗುರಿ ಆಗಿದೆ. ಜೊತೆಗೆ ಈ ವರ್ಷದಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಸಂಬಂಧಿಸಿದಂತಹ ಸೇವೆಗಳನ್ನು ಮತ್ತಷ್ಟು ಬಲಿಷ್ಠಗೊಳಿಸುವುದು ಆರೋಗ್ಯ ಇಲಾಖೆಯ ಧ್ಯೇಯವಾಗಿದೆ.

j3tvkannada
ಖುಷಿ ಕುಟುಂಬದ ಸೂತ್ರ ತಾಯಿ ಮತ್ತು ಮಕ್ಕಳ ಆರೋಗ್ಯದಲ್ಲಿದೆ. ಈ ನಿಟ್ಟಿನಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ತೀವ್ರ ಪ್ರಮಾಣದಲ್ಲಿ ಕಡಿಮೆಗೊಳಿಸುವ ಗುರಿಯನ್ನು ಆರೋಗ್ಯ ಇಲಾಖೆ ಹಾಕಿಕೊಂಡಿದೆ. ಮಹಿಳೆಯರ ದೀರ್ಘಕಾಲೀನ ಆರೋಗ್ಯ ಮತ್ತು ಯೋಗಕ್ಷೇಮ ಇಲಾಖೆಯ ಗುರಿಯಾಗಿದೆ. ಈ ನಿಟ್ಟಿನಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯ ತಪಾಸಣೆ ನಡೆಸುವ ತಜ್ಞ ವೈದ್ಯರ ನೇಮಕ ಹಾಗೂ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಎನ್ಐಸಿಯುಗಳ ಹೆಚ್ಚಳಕ್ಕೆ ಸರ್ಕಾರ ಕ್ರಮವಹಿಸಲಿದೆ ಎನ್ನುತ್ತಾರೆ. ಗದಗ ಜಿಲ್ಲೆಯ ಆರೋಗ್ಯ ಇಲಾಖೆ ಅಧಿಕಾರಿಗಳು.
ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಗದಗ ಜಿಲ್ಲೆಯಲ್ಲಿ ತಾಯಿ ಮತ್ತು ಮಗುವಿನ ಮರಣ ಪ್ರಮಾಣ ಕಡಿಮೆ ಇದೆ. ಬಾಣಂತಿಯರ ಸಾವಿನ ಪ್ರಮಾಣ ಕೂಡ ಶೂನ್ಯವಾಗಿದೆ ಎಂದು ಗದಗ ತಾಲ್ಲೂಕು ವೈದ್ಯಾಧಿಕಾರಿ ಡಾ. ಪ್ರೀತ್ ಖೋನ ತಿಳಿಸಿದ್ದಾರೆ.