
ರಾಮನಗರ: ಮಾಗಡಿ ಪಟ್ಟಣದ ಕಲ್ಯಾ ವೃತ್ತದ ಮಾಗಡಿ- ಕುಣಿಗಲ್ ರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಾಲ್ಲೂಕಿನ ಶ್ರೀಪತಿಹಳ್ಳಿ ದೇವರಹಟ್ಟಿ ಗ್ರಾಮದ ಕೆ. ನವೀನ್ ಕುಮಾರ್ (25) ಮೃತರು.

j3tvkannada
ಬೆಂಗಳೂರಿನ ಕಡೆಯಿಂದ ಬರುತ್ತಿದ್ದ ಕಾರು ವೇಗ ನಿಯಂತ್ರಣ ತಪ್ಪಿ ಕುಣಿಗಲ್ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು ಎಂದು ಮಾಗಡಿ ಠಾಣೆ ಪೊಲೀಸರು ತಿಳಿಸಿದರು. ಕಾರಿನಲ್ಲಿ ಇದ್ದವರು ಹಾಸನಕ್ಕೆ ತೆರಳುತ್ತಿದ್ದು, ರಸ್ತೆ ಕೆಲಸ ಮಾಡುವರರು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಕಾರು ಮತ್ತು ಬೈಕ್ ನಜ್ಜುಗುಜ್ಜಾಗಿವೆ. ಘಟನೆ ಕುರಿತು ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.