
ಶೈಕ್ಷಣಿಕ ವರ್ಷವೊಂದು ಈಗ ತಾನೇ ಮುಗಿದಿದೆ. ಮುಂಬರುವ ಶೈಕ್ಷಣಿಕ ವರ್ಷದತ್ತ ಚಿತ್ತ ಹರಿಸಿರುವ ಜಿಲ್ಲೆಯ ವಿವಿಧ ಸರ್ಕಾರಿ ಶಾಲೆಗಳ ಶಿಕ್ಷಕರು, ತಮ್ಮ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಸೆಳೆಯಲು ಕಸರತ್ತು ನಡೆಸಿದ್ದಾರೆ.

j3tvkannada
ಖಾಸಗಿ ಶಿಕ್ಷಣ ಸಂಸ್ಥೆಗಳು ದಾಖಲಾತಿ ಹೆಚ್ಚಿಸಲು ಮನೆ ಮನೆ ಭೇಟಿ, ಸೌಲಭ್ಯಗಳ ಮಾಹಿತಿಯುಳ್ಳ ಕರಪತ್ರ ಹಂಚುವಿಕೆ, ಪ್ಲೆಕ್ಸ್ ಅಳವಡಿಕೆ ಕಾರ್ಯ ಆರಂಭಿಸಿದ್ದು, ಇದಕ್ಕೆ ಪ್ರತಿಯಾಗಿ ಸರ್ಕಾರಿ ಶಾಲೆ ಶಿಕ್ಷಕರೂ ತಮ್ಮಲ್ಲಿ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂಬ ಅಭಿಯಾನ ಆರಂಭಿಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಮೂಲಸೌಲಭ್ಯಗಳ ಕೊರತೆ, ಪಾಠ ಸರಿಯಾಗಿ ಮಾಡುವುದಿಲ್ಲವೆಂದು ಬಹುತೇಕ ಪಾಲಕರು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಕುಸಿಯುತ್ತಿದೆ. ಇದರಿಂದ ಎಚ್ಚೆತ್ತಿರುವ ಶಿಕ್ಷಕರು ದಾನಿಗಳ ನೆರವಿನಿಂದ ಶಾಲೆಯನ್ನು ಅಭಿವೃದ್ಧಿಪಡಿಸಲು ಕ್ರಮವಹಿಸಿದ್ದಾರೆ.