
ಗದಗ : ಮಗಳ ಮೇಲೆ ತಂದೆ ಅತ್ಯಾಚಾರ ನಡೆಸಿ, ಗರ್ಭಿಣಿ ಮಾಡಿದ್ದು ಸಂತ್ರಸ್ತ ಬಾಲಕಿಯ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

j3tvkannada.in
ಕೈಕಾಲು ನೋಯುತ್ತಿದ್ದ ಕಾರಣ ಚಿಕಿತ್ಸೆಗಾಗಿ ತಾಯಿಯೊಡನೆ ಬಾಲಕಿಯು ಗದಗ ಜಿಲ್ಲಾ ಆಸ್ಪತ್ರೆಗೆ ಹೋದಾಗ, ಆಕೆ ಗರ್ಭಿಣಿಯಾಗಿದ್ದು ಗೊತ್ತಾಗಿದೆ. ಈ ಬಗ್ಗೆ ವಿಚಾರಿಸಿದಾಗ, ಒಂದು ವರ್ಷದಿಂದ ಅವರ ತಂದೆ ನಿರಂತರ ಅತ್ಯಾಚಾರ ಎಸಗಿರುವುದಾಗಿ ತಾಯಿಗೆ ಹೇಳಿದ್ದಾಳೆ. ಪೋಕ್ಸೊ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಎಂದು ಮುಳಗುಂದ ಠಾಣೆ ಪೊಲೀಸರು ತಿಳಿಸಿದ್ದಾರೆ.