
ಚಿಕ್ಕಬಳ್ಳಾಪುರ: ಗುಡಿಬಂಡೆ ಗ್ರಾಮೀಣ ಪ್ರದೇಶದ ಮಹಿಳೆಯರ ಜೀವನ ಮಟ್ಟ ಸುಧಾರಣೆಗೆ ಮತ್ತು ಅವರ ಕುಟುಂಬಕ್ಕೆ ಆರ್ಥಿಕ ಶಕ್ತಿ ನೀಡಲು ಮನರೇಗಾ ಸಹಕಾರಿಯಾಗಿದೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅರ್ಚನಾ ತಿಳಿಸಿದರು.

j3tvkannada
ತಾಲ್ಲೂಕು ಅಭಿಯಾನ ನಿರ್ವಹಣಾ ಘಟಕ, ಪರಿವರ್ತನ ಅಭಿಯಾನ ಘಟಕ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಉಲ್ಲೋಡು ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ‘ಸ್ತ್ರೀ ಚೇತನ’ ವಿಶೇಷ ಅಭಿಯಾನ ಉದ್ಘಾಟಿಸಿ ಮಾತನಾಡಿದರು. ಮಹಿಳಾ ಕೂಲಿಕಾರ್ಮಿಕರಿಗೆ ಪ್ರತ್ಯೇಕವಾಗಿ ಮಹಿಳಾ ಸಮುದಾಯ ಕಾಮಗಾರಿ ಆರಂಭಿಸಲಾಗಿದೆ. ಈ ಯೋಜನೆಯಡಿಯಲ್ಲಿ ಕಾಯಕ ಬಂಧುಗಳ ನೇಮಕದಲ್ಲಿ ಮಹಿಳೆಯರಿಗೆ ಪ್ರತಿನಿತ್ಯ ನೀಡಲಾಗಿದೆ. ಮಹಿಳೆಯರಿಗೆ ಮನರೇಗಾ ಯೋಜನೆಯಡಿಯಲ್ಲಿ ಲಿಂಗ ತಾರತಮ್ಯ ಇಲ್ಲದೆ ಸಮಾನ ಕೂಲಿ ನೀಡಲಾಗುತ್ತಿದೆ ಎಂದು ತಿಳಿಸಿದರು. ಖಾಸಗಿ ಬ್ಯಾಂಕ್ಗಳಲ್ಲಿ ಹೆಚ್ಚು ಬಡ್ಡಿ ವಿಧಿಸಲಾಗುತ್ತಿದೆ. ಹಾಗಾಗಿ ಸ್ವ ಸಹಾಯ ಸಂಘಗಳಲ್ಲಿ ಕಡಿಮೆ ಬಡ್ಡಿಯಲ್ಲಿ ಸಾಲ ಪಡೆದುಕೊಂಡು ಕುಟುಂಬ ಹಾಗೂ ಮಕ್ಕಳ ವಿದ್ಯಾಭ್ಯಾಸ ಜೊತೆಗೆ ಕೈಗಾರಿಕೆ, ಉದ್ದಿಮೆಯಲ್ಲಿ ಸೇರಿದಂತೆ ಎಲ್ಲಾ ರಂಗದಲ್ಲೂ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಎಂದು ತಿಳಿಸಿದರು.