
ಯಾದಗಿರಿ: ನಗರ ಸೇರಿದಂತೆ ಜಿಲ್ಲೆಯಲ್ಲಿ ಐಪಿಎಲ್ ಬೆಟ್ಟಿಂಗ್ ಕಾವೇರಿದ್ದು, ಆನ್ಲೈನ್ ಮೂಲಕ ಹಣ ತೊಡಗಿಸುವುದು ಕಂಡುಬರುತ್ತಿದೆ.

j3tvkannada
ಜಿಲ್ಲೆಯ ಶಹಾಪುರ, ಸುರಪುರ ತಾಲೂಕಿನಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆ ಜೋರಾಗಿ ನಡೆಯುತ್ತಿದೆ. ಐಪಿಎಲ್ ಬೆಟ್ಟಿಂಗ್ ಆನ್ಲೈನ್ ಗೇಮ್ ಹಾವಳಿಯಿಂದ ಯುವಜನತೆ ಅಡ್ಡದಾರಿ ಹಿಡಿದು ಹಾಳಾಗುತ್ತಿದ್ದು, ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ. ನಗರ ಪ್ರದೇಶಗಳ ಜೊತೆಗೆ ಗ್ರಾಮೀಣ ಪ್ರದೇಶದಲ್ಲೂ ಈಗ ಬೆಟ್ಟಿಂಗ್ ಹಾವಳಿ ಕಾವೇರಿದೆ. ಶಾಲಾ ಕಾಲೇಜುಗಳಿಗೆ ರಜೆ ನೀಡಿದ್ದೂ ವಿದ್ಯಾರ್ಥಿಗಳು ಐಪಿಎಲ್ ಬೆಟ್ಟಿಂಗ್ ಆ್ಯಪ್ಗಳನ್ನು ತಡಕಾಡುತ್ತಿದ್ದಾರೆ ಎನ್ನುವ ಮಾಹಿತಿ ದೊರಕಿದೆ.