
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ 2024-25ನೇ ವರ್ಷದಲ್ಲಿ ಹಣಕಾಸು 4.10 ಕೋಟಿ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಈ ವಿಮಾನ ನಿಲ್ದಾಣದಿಂದ ಐದು ಲಕ್ಷ ಟನ್ ಸರಕು ಸಾಗಣೆ ಮಾಡಲಾಗಿದೆ.

j3tvkannada
ದೇಶೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ10ರಷ್ಟು ಏರಿಕೆಯಾಗುವ ಮೂಲಕ 3.60 ಕೋಟಿ ತಲುಪಿದೆ. ಅಂತರರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 25ರಷ್ಟು ಹೆಚ್ಚಳವಾಗುವ ಮೂಲಕ 50.83 ಲಕ್ಷ ತಲುಪಿದೆ. 2023-24ರಲ್ಲಿ 3.75 ಕೋಟಿ ಪ್ರಯಾಣಿಕರು ಪ್ರಯಾಣಿಸಿದ್ದರು. ಅದಕ್ಕೆ ಹೋಲಿಸಿದರೆ 2024-25 ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಖ್ಯೆ ಶೇ 11.6ರಷ್ಟು ಹೆಚ್ಚಳವಾಗಿದೆ. ಈ ಮೂಲಕ ಹೊಸ ದಾಖಲೆ ಸೃಷ್ಟಿಯಾಗಿದ್ದು ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯಲ್ಲಿ ಮೈಲುಗಲ್ಲು ಸೃಷ್ಟಿಸಿದೆ ಎಂದು ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ.
ನಾಲ್ಕು ತಿಂಗಳಲ್ಲಿ ಅಂತರ ರಾಷ್ಟ್ರೀಯ ಪ್ರಯಾಣಿಕರ ಪ್ರಯಾಣ ಸಂಖ್ಯೆಯಲ್ಲಿ ಭಾರತದ ಮೂರನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.ಇಂಡಿಗೊ ವಿಮಾನಯಾನ ಸಂಸ್ಥೆ ಜಾಗತಿಕವಾಗಿ ಜಾಲ ವಿಸ್ತರಿಸಿರುವುದು ಲಂಡನ್ನ ಹೀಫೊಗೆ ದೈನಂದಿನ ಹೆಚ್ಚುವರಿ ವಿಮಾನ ಹಾರಾಟ ಆರಂಭ ಆಗಿರುವುದು ಅಂತರರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ.