
ಶಿವಮೊಗ್ಗ: ಶಿಕ್ಷಕರು ವಿಷಯದ ಪರಿಣತಿಯ ಜೊತೆಗೆ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು ಅನಿವಾರ್ಯವಾಗಿದೆ. ವೃತ್ತಿ ಕೌಶಲ ಬೆಳೆಸಿಕೊಂಡರೆ ಮಾತ್ರ ಸವಾಲುಗಳನ್ನು ಎದುರಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಎಂ. ಚಂದ್ರಶೇಖರಯ್ಯ ಅಭಿಪ್ರಾಯಪಟ್ಟರು.

j3tvkannada
ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಬಾಳಗಾರು ಗ್ರಾಮದಲ್ಲಿ ಹಮ್ಮಿಕೊಂಡಿರುವ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.ಸ್ಮಾರ್ಟ್ ಕ್ಲಾಸ್, ಡಿಜಿಟಲ್ ಶಿಕ್ಷಣ, ಪಿಪಿಪಿ, ಸಾಫ್ಟ್ವೇರ್ ಬಳಕೆ ಸಾಮಾನ್ಯವಾಗುತ್ತಿದೆ. ಶಿಕ್ಷಕ ವೃತ್ತಿಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದರೂ ಅದನ್ನು ಸವಾಲಾಗಿ ಸ್ವೀಕರಿಸಬೇಕು. ತಂತ್ರಜ್ಞಾನದ ಬಳಕೆಯಿಂದ ಶಿಕ್ಷಣದ ಗುಣಮಟ್ಟ ಸುಧಾರಣೆ ಸಾಧ್ಯ. ವೃತ್ತಿಯನ್ನು ಪ್ರೀತಿಸಿದಾಗ ಸಂತೃಪ್ತಿ ದೊರೆಯುತ್ತದೆ. ಸಂತೋಷದಿಂದ ಮಾಡುವ ಕೆಲಸ ಹೊರೆ ಎನಿಸುವುದಿಲ್ಲ ಎಂದರು.