
ಯಾದಗಿರಿ: ದ್ವಿತೀಯ ಪದವಿ ಪೂರ್ವ ಕಾಲೇಜು ಫಲಿತಾಂಶದಲ್ಲಿ ನಗರಕ್ಕಿಂತ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಟಾಪ್ ಸ್ಥಾನ ಪಡೆದಿದ್ದಾರೆ.

j3tvkannada
ನಗರ ಪ್ರದೇಶದಲ್ಲಿ 2025 ಮಾರ್ಚ್ ತಿಂಗಳಲ್ಲಿ ನಡೆದ ಪರೀಕ್ಷೆಗೆ 8,697 ವಿದ್ಯಾರ್ಥಿಗಳು ಹಾಜರಾಗಿದ್ದು, 3,746 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ 43.7 ರಷ್ಟು ಫಲಿತಾಂಶ ಬಂದಿದೆ. ಗ್ರಾಮಾಂತರ ಪ್ರದೇಶದಲ್ಲಿ 2,166 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 958 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ 44.23 ರಷ್ಟು ಫಲಿತಾಂಶ ಬಂದಿದೆ. ಇನ್ನು ಬಾಲಕರ ಫಲಿತಾಂಶಕ್ಕೆ ಸಂಬಂಧಿಸಿದಂತೆ 5,350 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 1,865 ಉತ್ತೀರ್ಣರಾಗಿ ಶೇ 34.86 ಫಲಿತಾಂಶ ಪಡೆದಿದ್ದಾರೆ. 5,513 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದು, 2,839 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಶೇ 51.50 ರಷ್ಟು ಫಲಿತಾಂಶವನ್ನು ಈ ವರ್ಷದಲ್ಲಿ ಪಡೆದಿದ್ದಾರೆ.