
ಕೊಡಗು: ರಾಜ್ಯದ ನಾನಾ ಕಡೆಗಳಲ್ಲಿ ಈಗಾಗಲೇ ಮಳೆಯ ಅಬ್ಬರ ಶುರುವಾಗಿದ್ದು ಸುಂಟಿಕೊಪ್ಪ ಪಟ್ಟಣ ಸೇರಿದಂತೆ ಹೋಬಳಿ ವ್ಯಾಪ್ತಿಯಲ್ಲಿ ಸೋಮವಾರ ಸಂಜೆ ಧಾರಾಕಾರವಾಗಿ ಮಳೆ ಸುರಿಯಿತು.

j3tvkannada
ಉರಿಬಿಸಿಲಿನಿಂದ ಕೂಡಿದ್ದ ವಾತಾವರಣ ಸಂಜೆ 3.30 ನಂತರ ಮೋಡ ಆವರಿಸಿ ಗುಡುಗು, ಸಿಡಿಲಿನ ಆರ್ಭಟ ಹೆಚ್ಚಾಗಿತ್ತು. ಸಂಜೆ 4 ಗಂಟೆಯಿಂದ ಎಡೆಬಿಡದೇ ಧಾರಾಕಾರವಾಗಿ ಮಳೆ ಸುರಿಯಿತು. ರಭಸದ ಮಳೆಯಿಂದಾಗಿ ಜನಜೀವನ ಮತ್ತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಹರದೂರು ಮತ್ತು ಗುಂಡುಗುಟ್ಟಿ ಭಾಗದಲ್ಲಿ ಭಾರೀ ಮಳೆ ಸುರಿಯಿತು. ಕೊಡಗರಹಳ್ಳಿ, ಕೆದಕಲ್, ಏಳನೇ ಹೊಸಕೋಟೆ, ಗರಗಂದೂರು ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ. ಈ ಮೂಲಕ ವಾತಾವರಣ ತಂಪಾಗಿದ್ದು ಸ್ವಲ್ಪ ಮಟ್ಟಿಗೆ ಸೆಖೆಯ ದಗೆ ಕಡಿಮೆಯಾಗಿದೆ ಎನ್ನಬಹುದಾಗಿದೆ.