
ವಿಜಯಪುರ: ಬಸರಕೋಡ ರಸ್ತೆಯಲ್ಲಿ ಬೆಂಗಳೂರು ಮೂಲದ ಕಾರಿನ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಕಾರು ಬೆಂಕಿಗೆ ಆಹುತಿಯಾಗಿದೆ.

j3tvkannada
ತಕ್ಷಣ ಕಾರಿನಲ್ಲಿದ್ದವರು ಕೆಳಗಿಳಿದಿದ್ದರಿಂದ ಸಂಭವನೀಯ ಬೆಂಕಿ ಅವಘಡದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ಮಹಿಳೆ, ಚಾಲಕ ಸೇರಿ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕ ವಾಹನ ಸ್ಥಳಕ್ಕೆ ಬರುವಷ್ಟರಲ್ಲಿ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.