
ತುಮಕೂರು: ಪುರಸಭೆಯ ಸಿಬ್ಬಂದಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಪುರಸಭೆ ಅಧ್ಯಕ್ಷ ರಾಜೇಶ್ ತಿಳಿಸಿದರು. ಪುರಸಭೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಕಂದಾಯ ವಸೂಲಿ, ಸ್ವಚ್ಛತೆ, ಕುಡಿಯುವ ನೀರಿನ ಪೂರೈಕೆ ವಿಚಾರದಲ್ಲಿ ಸಿಬ್ಬಂದಿ, ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಪಟ್ಟಣದ ಎಲ್ಲ ಬಡಾವಣೆಗಳ ಮೂಲ ಸವಲತ್ತುಗಳ ವಿಚಾರಕ್ಕೆ ಆದ್ಯತೆ ನೀಡಬೇಕು ಎಂದರು.

j3tvkannada
ಪುರಸಭೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣದ ಎಲ್ಲಾ ಬಡಾವಣೆಗಳ ಮೂಲ ಸವಲತ್ತುಗಳ ವಿಚಾರಕ್ಕೆ ಆದ್ಯತೆ ನೀಡಬೇಕು ಎಂದರು. ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲ. ಕಂದಾಯ ವಸೂಲಿ ಮಾಡುತ್ತಿಲ್ಲ, ಇದರಿಂದಾಗಿ ಲಕ್ಷಾಂತರ ರೂಪಾಯಿ ಕಂದಾಯ ಬಾಕಿ ಇದೆ. ಪುರಸಭೆಯ ಆದಾಯ ಕಡಿಮೆಯಾಗುತ್ತಿದೆ. ಸಮರ್ಪಕವಾಗಿ ಕೆಲಸ ಮಾಡದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಶಿಫಾರಸು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ವಾಣಿಜ್ಯ ಮಳಿಗೆಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು. ಇದರಿಂದ ಪುರಸಭೆಗೆ ಹೆಚ್ಚುವರಿ ಆದಾಯ ಬಂದಿದೆ. ಈ ಆದಾಯದಿಂದ ಪುರಸಭಾ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಹುದು ಎಂದರು. ವಾಣಿಜ್ಯ ಮಳಿಗೆಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹೋಗಿರುವ ಅಂಗಡಿ ಮಾಲೀಕರಿಗೆ ಪುರಸಭೆಯಿಂದ ಯಾವುದೇ ಸೌಲಭ್ಯಗಳನ್ನು ನೀಡಬಾರದು ಎಂದು ಸದಸ್ಯರು ಒತ್ತಾಯಿಸಿದರು.