
ಕೇಂದ್ರದ ಬಿಜೆಪಿ ಸರ್ಕಾರವು ಜಾರಿ ನಿರ್ದೇಶನಾಲಯ (ಇ.ಡಿ), ಸಿ.ಬಿ.ಐ ಮೊದಲಾದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷದ ನಾಯಕರನ್ನು ಕಟ್ಟಿ ಹಾಕಲು ಪ್ರಯತ್ನಿಸುತ್ತಿದೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಆರೋಪಿಸಿದರು.

j3tvkannada
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ದ ಜಾರಿ ನಿರ್ದೇಶನಾಲಯವು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಆದಿ ಉಡುಪಿಯ ಆದಾಯ ತೆರಿಗೆ ಕಚೇರಿ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಅಶೋಕ್ ಚೌಹಾಣ್ ಸೇರಿದಂತೆ ಹಲವಾರು ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ, ಅನಂತರ ಅವರನ್ನು ಬಿಜೆಪಿಗೆ ಸೇರಿಸಿಕೊಂಡು ಅವರ ವಿರುದ್ಧದ ಪ್ರಕರಣಗಳನ್ನು ಖುಲಾಸೆಗೊಳಿಸಲಾಗಿದೆ ಎಂದರು. ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ. ಪ್ರಜಾಪ್ರಭುತ್ವವನ್ನು ಮುಂದಿನ ಪೀಳಿಗೆಗೂ ಉಳಿಸಲು ನಾವೆಲ್ಲ ಒಗ್ಗಟ್ಟಾಗಿ ಹೋರಾಟ ನಡೆಸುವ ಅಗತ್ಯ ಇದೆ ಎಂದು ಅವರು ಹೇಳಿದರು. ತಮ್ಮ ಸಂಪತ್ತನ್ನು ದೇಶಕ್ಕೆ ಸಮರ್ಪಣೆ ಮಾಡಿದ ಗಾಂಧಿ ಕುಟುಂಬದ ಮೇಲೆ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು.