
ದಾವಣಗೆರೆ: ಶಾಲೆಗೆ ಬೇಸಿಗೆ ರಜೆ ಇದ್ದ ಕಾರಣಕ್ಕೆ 13 ವರ್ಷದ ಬಾಲಕಿಯೊಬ್ಬಳು ಅಜ್ಜಿ ಮನೆಗೆ ಬಂದಿದ್ದಳು. 2023ರ ಏ.27ರಂದು ಅಜ್ಜಿ ಕಾರ್ಯ ನಿಮಿತ್ತ ಮನೆಯಿಂದ ಹೊರ ಹೋಗಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿಯನ್ನು ತಿಮೋತಿ ಅಪಹರಿಸಿದ್ದನು. ಈ ಕೃತ್ಯಕ್ಕೆ ರೋಜಾ ಸಹಕಾರ ನೀಡಿದ್ದಳು. ಬಾಲಕಿಯನ್ನು ರೈಲಿನಲ್ಲಿ ತುಮಕೂರು ಹಾಗೂ ರಾಮನಗರ ಜಿಲ್ಲೆಗೆ ಕರೆದೊಯ್ದು ಅಪರಾಧಿ ಅತ್ಯಾಚಾರ ಎಸಗಿದ್ದನು. ಬಾಲಕಿಗೆ ಹುಡುಕಾಟ ನಡೆಸಿದ ಕುಟುಂಬದ ಸದಸ್ಯರು ಮಹಿಳಾ ಠಾಣೆಗೆ ದೂರು ನೀಡಿದ್ದರು.

j3tvkannada
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಮಹಿಳಾ ಠಾಣೆಯ ಇನ್ಸ್ಪೆಕ್ಟರ್ ಎಂ.ಆರ್. ಚೌಬೆ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಇದೀಗ ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ಕೃತ್ಯಕ್ಕೆ ಸಹಕರಿಸಿದ ಮಹಿಳೆಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ 1ನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
ದಾವಣಗೆರೆಯ ತಿಮೋತಿ (22) ಹಾಗೂ ರೋಜಾ (20) ಶಿಕ್ಷೆಗೆ ಗುರಿಯಾದ ಅಪರಾಧಿಗಳು. ತಿಮೋತಿಗೆ 35,000 ಹಾಗೂ ರೋಜಾಗೆ ₹ 5,000 ದಂಡ ವಿಧಿಸಲಾಗಿದೆ. ಸಂತ್ರಸ್ತ ಬಾಲಕಿಗೆ ಸರ್ಕಾರ ₹ 5 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ ಅದೇಶದಲ್ಲಿ ಶಿಫಾರಸು ಮಾಡಿದ್ದಾರೆ. ಸರ್ಕಾರದ ಪರವಾಗಿ ವಕೀಲೆ ಸುನಂದಾ ಮಡಿವಾಳರ್ ವಾದ ಮಂಡಿಸಿದ್ದಾರೆ.