
ಮಡಿಕೇರಿ: ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿರುವ ಸಾಂತ್ವನ ಮಹಿಳಾ ಸಹಾಯವಾಣಿಯಲ್ಲಿ 2024-25ನೇ ಆರ್ಥಿಕ ಸಾಲಿನಲ್ಲಿ 301 ಪ್ರಕರಣಗಳು ದಾಖಲಾಗಿ, 293 ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ 8 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತವೆ.

j3tvkannada
2002ರ ನ. 4ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ಸಾಂತ್ವನ ಮಹಿಳಾ ಸಹಾಯವಾಣಿಯು ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪತ್ರಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 5,419 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 511 ಪ್ರಕರಣಗಳು ಇತ್ಯರ್ಥಗೊಂಡಿವೆ.
ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಹೆಚ್ಚು ಜನರು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷ ಕೆ.ಎಸ್.ಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿ ಆರ್.ರೈ.ನಮಿತಾ ಅವರು ಕೋರಿದ್ದಾರೆ. ಮಾಹಿತಿಗೆ ಮೊ: 9880985939 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.