
ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಅಡುಗೆ ಸಿಲಿಂಡರ್ ಬೆಲೆ ಹೆಚ್ಚಿಸುವ ಮೂಲಕ ದೇಶದ ಜನ ಸಾಮಾನ್ಯರ, ಕೂಲಿ ಕಾರ್ಮಿಕರ ಬದುಕಿನ ಮೇಲೆ ಬರೆ ಎಳೆದಂತೆ ಮಾಡುತ್ತಿದೆ ಎಂದು ಐ.ಎನ್.ಟಿ.ಯು.ಸಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕುಂದಲಗುರ್ಕಿ ಮುನೀಂದ್ರ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರದ ಬಿಜೆಪಿ ಸರ್ಕಾರದ ಬೆಲೆ ಏರಿಕೆ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ನಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಬಸ್ಗಳಲ್ಲಿ ಹೊರಟ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

j3tvkannada
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಡೀಸೆಲ್, ಪೆಟ್ರೋಲ್, ಗ್ಯಾಸ್ನ ಬೆಲೆ ಹೆಚ್ಚಿಸುವ ಮೂಲಕ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಗ್ಯಾಸ್ ಬೆಲೆ ಏರಿಕೆ ಪ್ರಭಾವ ಜನ ಸಾಮಾನ್ಯರು, ಬಡ ಬಗ್ಗರ ಬದುಕಿನ ಮೇಲೆ ಪ್ರಭಾವ ಬೀರುತ್ತಿದೆ ಎಂದು ಆರೋಪಿಸಿದರು.
ಜನ ಸಾಮಾನ್ಯರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಬೆಲೆ ಏರಿಕೆ ಸಮರಕ್ಕೆ ಇಳಿದಿದ್ದು ಹೆಚ್ಚಿಸಿರುವ ಗ್ಯಾಸ್ ಬೆಲೆಯನ್ನು ಕೂಡಲೇ ಇಳಿಸಬೇಕೆಂದು ಆಗ್ರಹಿಸಿದರು. ಕಾಂಗ್ರೆಸ್ನ ಡಿಶ್ ಶ್ರೀನಾಥ್, ಎಂ.ರಾಮಾಂಜಿನಪ್ಪ, ಗಾಯಿತ್ರಮ್ಮ, ನಾಗರಾಜ್ ಹಾಜರಿದ್ದರು.