

j3tvkannada
ದಕ್ಷಿಣಕನ್ನಡ: ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ. ನಾವು ಧರ್ಮವನ್ನು ಕಾಪಾಡಬೇಕು ಎಂದು ಡಿ.ಸಿ.ಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಧರ್ಮಸ್ಥಳದ ಮಂಜುನಾಥ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ಈ ಧರ್ಮಕ್ಷೇತ್ರ ಜನಸೇವೆ, ಸಾಮಾಜಿಕ, ಶೈಕ್ಷಣಿಕ ಸೇವೆ ಮಾಡಿಕೊಂಡು ಬಂದಿದೆ. ಇದಕ್ಕೆ ಸಹಕಾರ ನೀಡಬೇಕಾಗಿರುವುದು ನಮ್ಮ ಕರ್ತವ್ಯ ಎಂದರು. ಕರಾವಳಿ ನಮ್ಮ ರಾಜ್ಯದ ಮುಖ್ಯವಾದ ಅಂಗ. ಮನುಷ್ಯನಿಗೆ ದೇಹದ ಅಂಗಗಳು ಎಷ್ಟು ಮುಖ್ಯವೋ, ಕರಾವಳಿ ಭಾಗವೂ ಅಷ್ಟೇ ಮುಖ್ಯ ಎಂದು ತಿಳಿಸಿದರು.