
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಾರ್ಚ್ ತಿಂಗಳಿನಲ್ಲಿ 515 ಹೆರಿಗೆಗಳಾಗಿದ್ದು, ಅವುಗಳಲ್ಲಿ 450 ಹೆರಿಗೆಗಳು ಸರ್ಕಾರಿ ಆಸ್ಪತ್ರೆಯಲ್ಲೇ ಆಗಿವೆ. ಖಾಸಗಿ ಆಸ್ಪತ್ರೆಯಲ್ಲಿ ಕೇವಲ 65 ಹೆರಿಗೆಗಳಷ್ಟೇ ಆಗಿವೆ. ಈ ವಿಷಯವು ಇಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೋಮವಾರ ನಡೆಸಿದ ಜಿಲ್ಲಾ ಆರೋಗ್ಯ ಅಭಿಯಾನ ಕುರಿತು ಸಭೆಯಲ್ಲಿ ಪ್ರಸ್ತಾಪವಾಯಿತು. ಈ ಅಂಕಿ ಅಂಶಗಳನ್ನು ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೌಲಭ್ಯ ಇರುವುದರಿಂದ ಸಹಜವಾಗಿಯೇ ಜನರು ಸರ್ಕಾರಿ ಆಸ್ಪತ್ರೆಗೆ ಹೆಚ್ಚು ಹೆಚ್ಚು ಬರುತ್ತಿದ್ದಾರೆ. ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರ ಹೊರತುಪಡಿಸಿ ಉಳಿದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಜ್ಞ ವೈದ್ಯರ ಕೊರತೆ ಇದೆ. ಅದರಲ್ಲಿ ಅರಿವಳಿಕೆ ತಜ್ಞರು, ಸ್ತ್ರೀರೋಗ ತಜ್ಞರು ಹಾಗೂ ಮಕ್ಕಳ ತಜ್ಞ ವೈದ್ಯರ ಕೊರತೆ ಹೆಚ್ಚಾಗಿದೆ. ಈ ಕೊರತೆಗಳ ಮಧ್ಯೆಯೂ ಉತ್ತಮ ಸೇವೆ ನೀಡಲಾಗುತ್ತಿದೆ ಎಂದು ಹೇಳಿದರು.

j3tvkannada
ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಮಧುಸೂದನ್ ಮಾತನಾಡಿ, ಮಾರ್ಚ್ ತಿಂಗಳಲ್ಲಿ 636 ಮಗುವಿಗೆ ಪೂರ್ಣ ಲಸಿಕೆ ನೀಡಲಾಗಿದೆ. ಇದುವರೆಗೆ 6,874 ಮಕ್ಕಳಿಗೆ ಲಸಿಕೆ ನೀಡಲಾಗಿದ್ದು, ಶೇ 95ರಷ್ಟು ಸಾಧನೆ ಮಾಡಲಾಗಿದೆ ಎಂದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಶ್ರೀನಿವಾಸ್ ಮಾತನಾಡಿ, ಡಿಸೆಂಬರ್ ಅಂತ್ಯಕ್ಕೆ 3 ಮಲೇರಿಯಾ ಪ್ರಕರಣಗಳು ಕಂಡು ಬಂದಿದ್ದು, ಎಲ್ಲರೂ ಗುಣಮುಖರಾಗಿದ್ದಾರೆ ಎಂದು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಮಾತನಾಡಿ, ಮಾರ್ಚ್ ತಿಂಗಳಿನಲ್ಲಿ 4,501 ಮಂದಿಯನ್ನು ಎಚ್.ಐ.ವಿ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 862 ಗರ್ಭಿಣಿಯರಿದ್ದಾರೆ. ಇಲ್ಲಿಯವರೆಗೆ ಒಟ್ಟು 57,945 ಮಂದಿಗೆ ಪರೀಕ್ಷೆ ನಡೆಸಲಾಗಿದೆ. ಇವರಲ್ಲಿ 10,299 ಮಂದಿ ಗರ್ಭಿಣಿಯರಿಗೆ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿಸಿದರು. ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಮಧುಸೂದನ್ ಮಾತನಾಡಿ, ಮಾರ್ಚ್ ತಿಂಗಳಲ್ಲಿ 636 ಮಗುವಿಗೆ ಪೂರ್ಣ ಲಸಿಕೆ ನೀಡಲಾಗಿದೆ.