ಬೆಂಗಳೂರು: ಮಹಾ ಶಿವರಾತ್ರಿಯು ಶಿವನಿಗೆ ಸಮರ್ಪಿತವಾಗಿದೆ. ಇದನ್ನು ಪ್ರತೀ ವರ್ಷ ಆಳವಾದ ಭಕ್ತಿಯಿಂದ ಆಚರಿಸಲಾಗುತ್ತದೆ. ಪಂಚಾಂಗದ ಪ್ರಕಾರ ಪ್ರತೀ ಮಾಸದಲ್ಲಿ ಶಿವರಾತ್ರಿ ಇರುತ್ತದೆ. ಇದಕ್ಕೆ’ಮಾಸ’ಶಿವರಾತ್ರಿ ಎಂದೂ, ವರ್ಷಕ್ಕೆ ಒಮ್ಮೆ ಬರುವ ಶಿವರಾತ್ರಿಯನ್ನು’ಮಹಾ’ಶಿವರಾತ್ರಿ ಎಂದೂ ಕರೆಯಲಾಗುತ್ತದೆ. ಈ ಪವಿತ್ರ ದಿನದಂದು ಭಕ್ತರು ಶಿವನ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಶಿವ ಮತ್ತು ಪಾರ್ವತಿ ದೇವಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ ಹಾಗೂ ಅವರವರ ನಂಬಿಕೆಗೆ ಅನುಸಾರವಾಗಿ ಉಪವಾಸವನ್ನು ಆಚರಿಸುತ್ತಾರೆ.
ಈ ದಿನ ಇಡೀ ರಾತ್ರಿ ಶಿವನ ದೇವಾಲಯಗಳಲ್ಲಿ ಬಹಳ ವಿಜೃಂಭಣೆಯಿಂದ ಪೊಜೆ ಪುನಸ್ಕಾರಗಳನ್ನು ಮಾಡಲಾಗುತ್ತಿದ್ದು, ಸಾವಿರಾರು ಭಕ್ತರು ಆಗಮಿಸಿ ಶಿವನ ಕೃಪೆಗೆ ಪಾತ್ರರಾಗುತ್ತಾರೆ. ಈ ಸಂದರ್ಭದಲ್ಲಿ ಶಿವನ “ಮಹಾಮೃತ್ಯುಂಜಯ” ಮಂತ್ರವನ್ನು ವಿಷೇಶವಾಗಿ ಭಕ್ತಿಯಿಂದ ಜಪಿಸುತ್ತಾರೆ. ಈ ಮಂತ್ರದ ಪಠಣೆಯಿಂದ ಕಷ್ಟಗಳು ನಿವಾರಣೆಯಾಗುತ್ತವೆ ಎಂಬ ನಂಬಿಕೆಯಿದೆ.