
ತುಮಕೂರು: ತಾಲ್ಲೂಕಿನ ಎನ್.ನಂದಿಹಳ್ಳಿ ಗೊಲ್ಲರಹಟ್ಟಿಯಲ್ಲಿ ಬಾಲಕ ಅಶ್ವಥ್ ಮೇಲೆ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿವೆ.

j3tvkannada
ಗ್ರಾಮದಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಹತ್ತಕ್ಕೂ ಹೆಚ್ಚು ನಾಯಿಗಳು ಒಮ್ಮೆಲೇ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿವೆ. ಬಾಲಕನ ಚೀರಾಟ ಕೇಳಿ ಓಡಿಬಂದ ಗ್ರಾಮಸ್ಥರು ಬಾಲಕನನ್ನು ನಾಯಿಗಳಿಂದ ರಕ್ಷಿಸಿದ್ದಾರೆ.
ಗ್ರಾಮ ಹಾಗೂ ಸುತ್ತಮುತ್ತ ನಾಯಿಗಳು ಹೆಚ್ಚುತ್ತಿರುವ ಬಗ್ಗೆ ಗ್ರಾಮ ಪಂಚಾಯಿತಿ ಗಮನಕ್ಕೆ ತರಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ತಕ್ಷಣವೇ ಸಂಬಂಧಿಸಿದವರು ಸೂಕ್ತಕ್ರಮ ಕೈಗೊಂಡು ನಾಯಿಗಳ ಹಾವಳಿ ನಿಯಂತ್ರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.