
ಬೆಳಗಾವಿ: ಬಾಕಿ ಉಳಿದಿರುವ ಮೂರು ತಿಂಗಳ (ಜನವರಿ, ಫೆಬ್ರವರಿ, ಮಾರ್ಚ್) ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದರು.

j3tvkannada
ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದೆ. ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.