ಕೊಪ್ಪಳ: ವಿದೇಶಿ ಮತ್ತು ದೇಶಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿಯ ಎಡದಂಡೆ ಕಾಲುವೆಯಲ್ಲಿ ನಡೆದಿದೆ. ಇಸ್ರೇಲ್, ಜರ್ಮನಿ ದೇಶದ ಇಬ್ಬರು, ಮಹಾರಾಷ್ಟ್ರ, ಓರಿಸ್ಸಾದ ಇಬ್ಬರು ಹಾಗೂ ಓರ್ವ ಸ್ಥಳೀಯ ಮಹಿಳೆಯ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.

ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಗಿಟಾರ್ ಬಾರಿಸುತ್ತಾ ಎಡದಂಡೆ ಕಾಲುವೆ ಮೇಲೆ ಪ್ರವಾಸಿಗರು ಕೂತಿದ್ದರು. ಈ ವೇಳೆ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆಗೊಳಗಾದವರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಗಾವತಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.