
ಬೆಳಗಾವಿ: ಜನಗಣತಿಯೊಂದಿಗೆ ಜಾತಿಗಣತಿಯನ್ನು ಸೇರ್ಪಡೆಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುವುದಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದ್ದಾರೆ.

j3tvkannada
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹೊರತು ಪಡಿಸಿ ಉಳಿದ ಯಾವುದೇ ಸಮುದಾಯಗಳ ನಿಖರ ಮಾಹಿತಿಯನ್ನು ಕೇಂದ್ರ ಸರ್ಕಾರವು ಹೊಂದಿಲ್ಲದ ಕಾರಣ ಜನಗಣತಿಯೊಂದಿಗೆ ಜಾತಿಗಣತಿ ಮಾಡುವ ನಿರ್ಣಯವನ್ನು ತೆಗೆದುಕೊಂಡಿರುವುದು ಐತಿಹಾಸಿಕ ಎಂದು ಅವರು ತಿಳಿಸಿದ್ದಾರೆ.
5 ದಶಕಗಳ ಕಾಲ ದೇಶವನ್ನು ಆಳಿದ ಕಾಂಗ್ರೆಸ್ ಎಂದೂ ಸಾಮಾಜಿಕ ನ್ಯಾಯದ ಪರ ಬದ್ಧತೆ ತೋರಿಲ್ಲ. ಬದಲಾಗಿ ಜಾತಿ- ಜಾತಿಗಳನ್ನು ಎತ್ತಿಕಟ್ಟುವ ಮೂಲಕ ಸಾಮಾಜಿಕ ಸ್ವಾಸ್ಥ್ಯ ಹಾಳುಗೆಡವುದರಲ್ಲಿ ಕಾಲ ಹರಣ ಮಾಡಿದೆ. ಹಲವು ದಶಕಗಳ ಕಾಲದಿಂದ ವೈಜ್ಞಾನಿಕವಾಗಿ ದೇಶದಾದ್ಯಂತ ಜಾತಿಗಣತಿ ಸಮೀಕ್ಷೆಗೆ ಯಾವ ಸರ್ಕಾರವೂ ಮುಂದಾಗಿಲ್ಲ. ರಾಷ್ಟ್ರದ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಸರ್ಕಾರವು ತೆಗೆದುಕೊಂಡಿರುವ ಈ ನಿರ್ದಾರದಿಂದ ದೇಶದಲ್ಲಿ ಹಿಂದುಳಿದವರು, ಆರ್ಥಿಕವಾಗಿ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕ ಸ್ಥಿತಿಗತಿ ಅರಿಯಲು ಅವರಿಗೆ ಯೋಜನೆಗಳನ್ನು ರೂಪಿಸಲು ಅನುಕೂಲವಾಗಲಿದೆ ಎಂದರು.