
ಬಾಗಲಕೋಟೆ: ರಾಜ್ಯಮಟ್ಟದಲ್ಲಿ ಜಿಲ್ಲೆಯು ಸ್ಥಾನ ಹಾಗೂ ಫಲಿತಾಂಶ ಎರಡಲ್ಲೂ ಕುಸಿತ ಕಂಡಿದೆ.

j3tvkannada
ಕಳೆದ ಬಾರಿ 13ನೇ ಸ್ಥಾನ ಪಡೆದಿದ್ದ ಜಿಲ್ಲೆಯೂ ಈ ಬಾರಿ 16ನೇ ಸ್ಥಾನಕ್ಕೆ ಕುಸಿದಿದೆ. ಕಳೆದ ಬಾರಿ ಜಿಲ್ಲೆಯು ಶೇ 77.92ರಷ್ಟು ಫಲಿತಾಂಶ ಪಡೆದಿತ್ತು. ಈ ಬಾರಿ ಶೇ68.29ಕ್ಕೆ ಕುಸಿದಿದೆ. ಜಿಲ್ಲೆಯಲ್ಲಿ 30,243 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 20,654 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಜಿಲ್ಲೆಯ ಬೀಳಗಿ ತಾಲ್ಲೂಕಿನ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಶಫಾ ನಿಂಬಾಳ್ಳರ್ 625ಕ್ಕೆ 624 ಅಂಕಗಳನ್ನು ಗಳಿಸಿದ್ದಾರೆ. ಇಂಗ್ಲಿಷ್ ಹೊರತುಪಡಿಸಿದರೆ ಉಳಿದ ಐದೂ ವಿಷಯಗಳಲ್ಲಿ 100ಕ್ಕೆ 100 ಅಂಕಗಳನ್ನು ಗಳಿಸಿದ್ದಾರೆ.